
ಮಂಗಳೂರು ಕೆಥೋಲಿಕ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯವರಾದ ಅತೀ ವಂ ಫಾ. ಆಂಟನೀ ಎಮ್. ಶೇರಾ ರವರು ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಜುಲೈ 26 ರಂದು ಭೇಟಿ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋರವರು ಸ್ವಾಗತಿಸಿದರು. ಕಾರ್ಯದರ್ಶಿಯವರು ಶಾಲಾ ಸೌಲಭ್ಯಗಳು ಮತ್ತು ಚಟುವಟಿಕೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಮಟ್ಟದ ಕರಾಟೆ ಮತ್ತು ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಶಿಕ್ಷಕ ವೃಂದದವರಿಗೆ ಸಭೆ ನಡೆಸಿ ಮಾರ್ಗದರ್ಶನ ನೀಡಿ, ಶುಭಹಾರೈಸಿದರು.






