
ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಆಗಸ್ಟ್ 13ರಂದು ಶಾಲಾ ಪಾಲಕರ ದಿನವನ್ನು ವಿನೂತನವಾಗಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ವಂ. ಫಾ. ವಿಜಯ್ ಲೋಬೊರವರು ಆಗಮಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಮ್ಮ ಜೀವನವು ದೇವರು ಕೊಟ್ಟ ಕೊಡುಗೆಯಾಗಿದೆ. ಅದನ್ನು ನಾವು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಬೇಕೆಂಬುದನ್ನು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಕ್ಲಿಫರ್ಡ್ ಪಿಂಟೋ ರವರು ಶಾಲಾ ಪಾಲಕರ ದಿನದ ಮಹತ್ವವನ್ನು ತಿಳಿಸಿದರು. ಶಾಲಾ ಪಾಲಕರ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ಭಗವಂತನ ಸಂದೇಶವನ್ನು ಮತ್ತು ದೇಶಪ್ರೇಮವನ್ನು ಬಿಂಬಿಸುವ ಹಾಡು, ರೂಪಕಗಳ ಮೂಲಕ ಎಲ್ಲರ ಮನರಂಜಿಸಿದರು. ವಿದ್ಯಾರ್ಥಿಗಳಾದ ಜಸೀರಾ ಸ್ವಾಗತಿಸಿ, ಅವಿನ್ ವಂದಿಸಿ, ಪ್ರತೀಕ್ಷಾ ದೊಡಮನಿ ಮತ್ತು ಸಂಶೀದಾ ಬಾನು ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿಯರಾದ ಶ್ರೀಮತಿ ಕವಿತಾ, ಕು. ವಿನಿತಾ ಮೋರಸ್ ಮತ್ತು ಶ್ರೀಮತಿ ಅನಿತಾ ಸಹಕರಿಸಿದರು.

